ಚಿಕ್ಕಮಗಳೂರು : ಚೀನಾದಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವದಾಧ್ಯಂತ ವ್ಯಾಪಕವಾಗಿ ಹರಡಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದ್ದು, ಈ ನಡುವೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಕೆಲ ಕಿಡಿಗೇಡಿಗಳು ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಇತ್ತೀಚೆಗೆ ದುಬೈನಿಂದ ಬಂದ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಕಿಡಿಗೇಡಿಗಳು ವಾಟ್ಸಾಪ್ ಗ್ರೂಪ್‍ಗಳಲ್ಲಿ ವ್ಯಕ್ತಿಯ ಹೆಸರು, ವಿಳಾಸವನ್ನು ಹಾಕಿ ಸಂದೇಶವನ್ನು ರವಾನೆ ಮಾಡುತ್ತಿದ್ದು, ದುಷ್ಕರ್ಮಿಗಳ ಈ ಕೃತ್ಯದಿಂದಾಗಿ ಆ ವ್ಯಕ್ತಿಗೆ ಹಾಗೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನ ಪಾಸಿಟಿವ್ ಎಂಬ ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳು…










