ಮೂಡಿಗೆರೆ : ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಅಟ್ಟಾಡಿಸಿಕೊಂಡು ಬಂದ ಕಾಡಾನೆ…

1499

ಮೂಡಿಗೆರೆ : ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆಯೊಂದು ಅಟ್ಟಾಡಿಸಿಕೊಂಡು ಬಂದಿರುವ ಘಟನೆ ತಾಲ್ಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ. ಸುನೀಲ್ ಎಂಬುವವರು ಗುತ್ತಿಹಳ್ಳಿ ಸಮೀಪ ತಮ್ಮ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ಸ್ಕೂಟಿಯನ್ನು ಅಟ್ಟಾಡಿಸಿಕೊಂಡು ಬಂದಿದ್ದು, ಈ ವೇಳೆ ಸುನೀಲ್ ಅವರು ಭಯದಿಂದ ಸ್ಕೂಟಿಯನ್ನು ರಸ್ತೆಯಲ್ಲೇ ಬಿಟ್ಟು ಓಡಿ ಹೋಗಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದು, ಕಾಡಾನೆಗಳ ಭಯದಿಂದ ಗ್ರಾಮಸ್ಥರು ರಸ್ತೆಯಲ್ಲಿ ಓಡಾಡಲು ಭಯಪಡುವಂತಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.