ನವದೆಹಲಿ : ಕೊರೊನಾ ಶಂಕಿತ ವ್ಯಕ್ತಿ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಡೆದಿದೆ. ತನ್ವೀರ್ ಸಿಂಗ್(35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಪಂಜಾಬ್ ಮೂಲದ ತನ್ವೀರ್ ಸಿಂಗ್ ಅವರು ನಿನ್ನೆ ಸಂಜೆ ಸಿಡ್ನಿಯಿಂದ ಹಿಂದಿರುಗಿದ್ದು, ಈ ವೇಳೆ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿ ಜ್ವರ ಕಾಣಿಸಿಕೊಂಡ ಹಿನ್ನೆಲೆ, ಪರೀಕ್ಷೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿ ವ್ಯಕ್ತಿಯ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ ಆ ವ್ಯಕ್ತಿ ಪ್ರಯೋಗಾಲಯದಿಂದ ವರದಿ ಬರುವ ಮುನ್ನವೇ ನಿನ್ನೆ ರಾತ್ರಿ 9ಗಂಟೆಗೆ ಆಸ್ಪತ್ರೆಯ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.










