ಕೊರೊನಾ ರಜೆ-ಪ್ರವಾಸಕ್ಕೆ ತೆರಳಿದ್ದ 5ಮಂದಿ ವಿದ್ಯಾರ್ಥಿಗಳು ರಸ್ತೆ ಅಪಘಾತಕ್ಕೆ ಬಲಿ…

494
firstsuddi

ಚೆನ್ನೈ : ಇನ್ನೋವಾ ಕಾರಿಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದು ಪ್ರವಾಸಕ್ಕೆ ತೆಳಿದ್ದ 5 ಮಂದಿ ವಿದ್ಯಾರ್ಥಿಗಳು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ತಿರುಪುರ್ ಸಮೀಪದ ಅವಿನಾಶಿ ಬಳಿ ನಡೆದಿದೆ. ಮೃತರನ್ನು ಸೂರ್ಯ(21), ಇಳವರಸನ್(21), ರಾಜೇಶ್(21), ವೆಂಕಟ್(21), ವಸಂತ್(21), ರಾಜೇಶ್(21) ಹಾಗೂ ಕಾರು ಚಾಲಕ ಮಣಿಕಂಠನ್(29) ಎಂದು ಗುರುತಿಸಲಾಗಿದ್ದು, ಮೃತ ವಿದ್ಯಾರ್ಥಿಗಳು ಕೊರೊನಾ ವೈರಸ್ ಭೀತಿ ಹಿನ್ನೆಲೆ, ಕಾಲೇಜಿಗೆ ರಜೆ ಇದ್ದುದರಿಂದ ಒಟ್ಟು 7 ವಿದ್ಯಾರ್ಥಿಗಳು ಪ್ರವಾಸ ಕೈಗೊಂಡಿದ್ದರು. ಈ ವೇಳೆ ಅವಿನಾಶಿ ಸಮೀಪ ತೆರಳುತ್ತಿದ್ದ ವೇಳೆ ಕಾರಿಗೆ ಹಿಂಬದಿಯಿಂದ ಸಿಮೆಂಟ್ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಇನ್ನು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಅವರನ್ನು ಅವಿನಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.