ನವದೆಹಲಿ : ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿರುವ ಕೊರೊನಾ ಸೋಂಕಿಗೆ ರಾಜಸ್ಥಾನ್ನಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 69 ವರ್ಷದ ವ್ಯಕ್ತಿ ಇಟಲಿಯಿಂದ ಭಾರತಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಅವರನ್ನು ತಪಾಸಣೆ ನಡೆಸಿದಾಗ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿತ್ತು. ಬಳಿಕ ಅವರನ್ನು ರಾಜಸ್ಥಾನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.










