ಬಾಲಿವುಡ್‍ನ ಖ್ಯಾತ ಗಾಯಕಿ ಕನ್ನಿಕಾ ಕಪೂರ್ ಗೆ ಕೊರೊನಾ ಪಾಸಿಟಿವ್…

238
firstsuddi

ಮುಂಬೈ : ಬಾಲಿವುಡ್‍ನ ಖ್ಯಾತ ಗಾಯಕಿ ಕನ್ನಿಕಾ ಕಪೂರ್ ಅವರಿಗೆ ಕೊರೊನಾ ವೈರಸ್ ತಗುಲಿರುವುದಾಗಿ ದೃಢಪಟ್ಟಿದ್ದು, ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯದ ಪ್ರತ್ಯೇಕ ವಾರ್ಡ್‍ನಲ್ಲಿ ಕನ್ನಿಕಾ ಕಪೂರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಿಕಾ ಕಪೂರ್ ಅವರು ಮಾರ್ಚ್ 15ರಂದು ಲಂಡನ್‍ನಿಂದ ಲಕ್ನೋಗೆ ಮರಳಿದ್ದು, ಬಳಿಕ ಅವರು ಹೋಟೆಲ್ ಒಂದರಲ್ಲಿ ವಾಸ್ತವ್ಯ ಮಾಡಿ ಪಾರ್ಟಿಯನ್ನು ಆಯೋಜಿಸಿದ್ದರು. ಬಳಿಕ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ತಪಾಸಣೆ ನಡೆಸಿದಾಗ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಇದೀಗಾ ಕನ್ನಿಕಾ ಕಪೂರ್ ಹಾಗೂ ಅವರ ಕುಟುಂಬಸ್ಥರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಕನ್ನಿಕಾ ಕಪೂರ್ ಅವರ ಪಾರ್ಟಿಯಲ್ಲಿ ಭಾಗಿಯಾಗಿದ್ದವರನ್ನು ಹುಡುಕಿ ಅವರನ್ನು ತಪಾಸಣೆ ನಡೆಸಿ ಅವರಲ್ಲಿ ಕೊರೊನಾ ಲಕ್ಷಣಗಳು ಕಂಡುಬಂದರೆ ಕೂಡಲೇ ವೀಕ್ಷಣೆಗೆ ತೆಗೆದುಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.