ಚಿಕ್ಕಬಳ್ಳಾಪುರ : ಮೆಕ್ಕಾದಿಂದ ವಾಪಸ್ಸಾದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಕ್ಯೆ 16ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಟ್ವೀಟ್ ಮಾಡಿದ್ದಾರೆ. ಈವರೆಗೂ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 249ಕ್ಕೆ ಏರಿಕೆಯಾಗಿದ್ದು, 5ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.










