ರಾಜ್ಯದಲ್ಲಿ ಇಂದು ಒಂದೇ ದಿನ ನಾಲ್ವರಲ್ಲಿ ಕೊರೊನಾ ಸೋಂಕು ಪತ್ತೆ…!

666
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ನಾಲ್ಕು ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ ನಾಲ್ವರಲ್ಲಿ ಕೊರೊನಾ ಸೋಂಕು ತಗುಲಿರುವುದಾಗಿ ದೃಢವಾಗಿದ್ದು, ಗೌರೀಬಿದನೂರಿನಲ್ಲಿ ಒಬ್ಬ ವ್ಯಕ್ತಿ ಹಾಗೂ ಬೆಂಗಳೂರಿನಲ್ಲಿ ಮೂವರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಅಲ್ಲದೇ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರಿಗೆ 48 ಸರ್ಕಾರಿ ಆಸ್ಪತ್ರೆ ಹಾಗೂ 35 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.