ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಅನೇಕ ಜನರು ಇನ್ನೂ ಲಾಕ್ಡೌನ್ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ದೇಶದಲ್ಲಿ ಕೊರೊನಾ ವೈರಸ್ನ್ನು ತಡೆಗಟ್ಟಲು ದಯವಿಟ್ಟು ಎಲ್ಲರೂ ಸರ್ಕಾರದ ಆದೇಶಗಳನ್ನು ಅನುಸರಿಸಿ ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಬೇಕಾಗಿದೆ. ಈಗಾಗಲೇ ಸರ್ಕಾರದ ಆದೇಶಿಸಿರುವ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಲು ನಾನು ರಾಜ್ಯ ಸರ್ಕಾರಗಳನ್ನು ವಿನಂತಿಸುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.











