ಹೋಂ ಕ್ವಾರಂಟೈನ್‍ನಲ್ಲಿದ್ದ ಕೊರೊನಾ ಶಂಕಿತ ಮಹಿಳೆ ಸಾವು…

729
firstsuddi

ಚಿಕ್ಕಬಳ್ಳಾಪುರ : ಮೆಕ್ಕಾ ಪ್ರವಾಸದಿಂದ ಆಗಮಿಸಿ ಹೋಂ ಕ್ವಾರಂಟೈನ್‍ನಲ್ಲಿದ್ದ ಕೊರೋನಾ ಶಂಕಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೂಲತಃ ಆಂಧ್ರದ ಹಿಂದೂಪುರ ಮೂಲದ 70 ವರ್ಷದ ಮಹಿಳೆ ಕಳೆದ ಕೆಲ ದಿನಗಳ ಹಿಂದೆ ಮೆಕ್ಕಾ ಪ್ರವಾಸವನ್ನು ಮುಗಿಸಿಕೊಂಡು ಜಿಲ್ಲೆಯ ಗೌರಿಬಿದನೂರಿನಲ್ಲಿ ಇರುವ ತಮ್ಮ ಮಗನ ಮನೆಯಲ್ಲಿ ಹೋಂ ಕ್ವಾರಂಟೈನ್‍ನಲ್ಲಿ ಇದ್ದರು. ನಿನ್ನೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ. ಮೃತ ಮಹಿಳೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮಹಿಳೆಯ ರಕ್ತದ ಮಾದರಿ ಹಾಗೂ ಗಂಟಲಿನ ದ್ರವವನ್ನು ಪಡೆದುಕೊಂಡು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಮಹಿಳೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರ ಎಂಬುವುದು ತಿಳಿಯಬೇಕಿದೆ.