ಹೈದರಾಬಾದ್ : ಇಡೀ ವಿಶ್ವದಾಧ್ಯಂತ ವ್ಯಾಪಕವಾಗಿ ಹರಡಿ ಭೀತಿ ಹೆಚ್ಚಿಸುತ್ತಿರುವ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡುವುದಾಗಿ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ತಡೆಗಟ್ಟುವ ಸಲುವಾಗಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 50 ಲಕ್ಷ ರೂನಂತೆ 1ಕೋಟಿ ಹಣವನ್ನು ನೀಡಿದ್ದು, ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 1ಕೋಟಿ ರೂ ಹಣವನ್ನು ದೇಣಿಗೆಯಾಗಿ ನೀಡುವುದಾಗಿ ತಿಳಿಸಿದ್ದು, ಬಳಿಕ ಈ ಮಹಾಮಾರಿ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಶ್ಲಾಘಿಸಿದ್ದಾರೆ.










