ಭಾರತ ಲಾಕ್‍ಡೌನ್-ಸಾರ್ವಜನಿಕರು ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು-ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ…

168
firstsuddi

ಬೆಂಗಳೂರು : ಕೊರೊನಾ ಭೀತಿ ಹೆಚ್ಚಾಗಿತ್ತಿರುವ ಹಿನ್ನೆಲೆ, ಕೇಂದ್ರ ಸರ್ಕಾರ ಇಡೀ ಭಾರತವನ್ನೇ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದು, ಈ ನಡುವೆ ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಹೊರಗೆ ಬಂದು ಸಾರ್ವಜನಿಕರು ಪೊಲೀಸರೊಂದಿಗೆ ಸಂಘರ್ಷಕ್ಕೆ ಮುಂದಾಗುತ್ತಿದ್ದು, ಇದರಿಂದ ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿಯಯಬಾರದು ಎಂದು ಟ್ವಿಟರ್ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. “ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯ. ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಖಾತ್ರಿ ಪಡಿಸಲು ಪೊಲೀಸರು ಹಗಲಿರುಳೂ ಶ್ರಮಿಸುತ್ತಿದ್ದಾರೆ. ತಮ್ಮ ಕುಟುಂಬದಿಂದ ದೂರವಿದ್ದುಕೊಂಡು ಆರೋಗ್ಯವನ್ನೂ ಲೆಕ್ಕಿಸದೆ ಕರ್ತವ್ಯ ಮಾಡುತ್ತಿದ್ದಾರೆ. ಪೊಲೀಸರ ಸುಗಮ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯ. ಹಾಗಾಗಿ, ಸಾರ್ವಜನಿಕರು ಪೊಲೀಸರೊಂದಿಗೆ ಸಂಘರ್ಷಕ್ಕೆ ಇಳಿಯಬಾರದೆಂದು ಮನವಿ ಮಾಡುತ್ತೇನೆ. ಹಾಗೆಯೇ, ಪೊಲೀಸರು ಕೂಡ ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಬೇಕು. ಸಂಕಷ್ಟದ ಸಮಯದಲ್ಲಿ ಪರಸ್ಪರ ಅರಿತು, ಸಹಕರಿಸೋಣ. ನಿಮಗೆ ನೆರವಾಗಲು ನಮಗೆ ನೆರವಾಗಿ” ಎಂದು ಟ್ವೀಟ್ ಮಾಡಿದ್ದಾರೆ.