ಮೂಡಿಗೆರೆ : ಬೆಂಗಳೂರಿನಲ್ಲಿ ಇರುವವರನ್ನು ದಯವಿಟ್ಟು ಊರಿಗೆ ಕಳುಹಿಸಿಕೊಡಿ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಮೂಡಿಗೆರೆ ಭಾಗದ ಬಹುತೇಕ ಯುವಕ ಯುವತಿಯರು ಉದ್ಯೋಗಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದು, ಈಗಾ ಮಹಾಮಾರಿ ಕೊರೊನಾ ಭೀತಿಯಿಂದ ಲಾಕ್ಡೌನ್ ಆಗಿರುವ ಹಿನ್ನೆಲೆ, ಅವರು ಕೆಲಸವಿಲ್ಲದೇ ಸಂಕಷ್ಟಪಡುವಂತಾಗಿದೆ. ಅಲ್ಲದೇ ಅಮಾಯಕರ ಮೇಲೆ ಪೊಲೀಸರ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ನಾವು ತೆಗೆದುಕೊಂಡಿರುವ ತೀರ್ಮಾನದಿಂದ ಅನೇಕರ ಜೀವನ ಬೀದಿಗೆ ಬಿದ್ದಿದೆ. ನಮ್ಮ ರಾಜ್ಯದಲ್ಲೂ ಕೂಡಾ ಉತ್ತರ ಪ್ರದೇಶ ಹಾಗೂ ದೆಹಲಿ ಸರ್ಕಾರಗಳು ಲಾಕ್ಡೌನ್ ಗೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳನ್ನು ಕೈಗೊಳ್ಳಬೇಕು. ಚುನಾವಣೆಯ ಸಂದರ್ಭದಲ್ಲಿ ನನಗೆ ಮತ ಹಾಕಲು ಯುವಕ ಯುವತಿಯರು ಬೆಂಗಳೂರಿನಿಂದ ಆಗಮಿಸಿದ್ದರು. ದಯವಿಟ್ಟು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಹಳ್ಳಿಗಳಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.









