ಬೆಂಗಳೂರು : ಇಡೀ ವಿಶ್ವದಾಧ್ಯಂತ ಭೀತಿ ಹೆಚ್ಚಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ಡೌನ್ ಮಾಡಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ನಟ ಪುನೀತ್ ರಾಜ್ಕುಮಾರ್ ಅವರು ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ 50 ಲಕ್ಷ ರೂ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಕೋವಿಡ್_19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು ಎಂದು ಟ್ವೀಟ್ ಮಾಡಿದ್ದಾರೆ.









