ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡುವುದಿಲ್ಲ : ಸಂಸದ ನಳಿನ್ ಕುಮಾರ್ ಕಟೀಲ್.

140
firstsuddi

ಮಂಗಳೂರು: ಯಾವುದೇ ಕಾರಣಕ್ಕೂ ಕೇರಳ ಗಡಿ ಓಪನ್ ಮಾಡೋಕೆ ಸಾಧ್ಯವಿಲ್ಲ ,ಜನರಿಗೆ ಆತಂಕ ಬೇಡ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಮ್ಮ ಜಿಲ್ಲೆಯ ಜನರ ಸಹಕಾರದಿಂದ ನಾವು ಕೊರೊನಾ ನಿಯಂತ್ರಿಸಲು ಯಶಸ್ವಿಯಾಗಿದ್ದೇವೆ. ಕೇರಳ ರಾಜ್ಯದಲ್ಲಿ ಸೋಂಕಿತರು ಹೆಚ್ಚಾಗಿರುವುದರಿಂದ ನಮ್ಮ ಜಿಲ್ಲೆಯ ಸುರಕ್ಷತೆ ಮುಖ್ಯ. ಆದ್ದರಿಂದ ಹೊರ ರಾಜ್ಯದವರಿಗೆ ಪ್ರವೇಶ ನೀಡಲ್ಲ ಎಂದು ಸಂಸದರು ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಅನುಸರಿಸಬೇಕಾಗುತ್ತದೆ. ಬೆಳಗ್ಗೆ 7 ರಿಂದ ಮಧ್ಯಾಹ್ನ 12ರ ವರೆಗೂ ಮಾರುಕಟ್ಟೆಗಳು ಓಪನ್ ಇರುತ್ತದೆ, ಆದರೆ ಈ ಅವಕಾಶವನ್ನು ಜನರು ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.