ಚಿಕ್ಕಮಗಳೂರು : ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸಿದೆ : ಕೆ.ವಿ.ಶಿವಕುಮಾರ್.

805
firstsuddi

ಚಿಕ್ಕಮಗಳೂರು : ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ವಿಧಿಸಿರುವುದರಿಂದದಾಗಿ ಬಡವರು, ಮದ್ಯಮ ವರ್ಗದವರು, ಕೂಲಿ ಕಾರ್ಮಿಕರು, ಹಾಗೂ ವ್ಯಾಪಾರಸ್ಥರು ಕೆಲಸವಿಲ್ಲದೇ ಆರ್ಥಿಕವಾಗಿ ಸೊರಗಿದ್ದಾರೆ. ದೈನಂದಿನ ಖರ್ಚುಗಳನ್ನು ಭರಿಸದಂತಹ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಬೆಲೆ ಇಳಿಕೆ ಮಾಡುವುದನ್ನು ಬಿಟ್ಟು ಹೆಚ್ಚಿಸಿರುವುದು ರಾಜ್ಯ ಸರ್ಕಾರದ ಜನವಿರೋಧಿ ನೀತಿಯಾಗಿದೆ ಎಂದು ಆರೋಪಿಸಿದ್ದಾರೆ.
ಜನತೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ದಿನಬಳಕೆ ಮತ್ತು ಅಗತ್ಯವಸ್ತುಗಳ ಕೃತಕ ಅಭಾವ ಸೃಷ್ಟಿಸಿ ಬೆಲೆಯನ್ನು ಲಂಗುಲಗಾಮಿಲ್ಲದೇ ಹೆಚ್ಚಳ ಮಾಡುತ್ತಿರುವವರ ವಿರುದ್ಧ ಸರ್ಕಾರ ಕೂಡಲೇ ಕಠಿಣ ಕ್ರಮಕೈಗೊಳ್ಳಬೇಕು. ಬೆಲೆ ಹೆಚ್ಚಳವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದ್ದಾರೆ.