ಕೊರೊನಾ ವೈರಸ್ ತಡೆಗಟ್ಟಲು ಸಿಎಂ ಪರಿಹಾರ ನಿಧಿಗೆ ಒಂದು ವರ್ಷದ ವೇತನ ದೇಣಿಗೆಯಾಗಿ ನೀಡಿದ ಸಚಿವ ಜಗದೀಶ್ ಶೆಟ್ಟರ್.

217
firstsuddi

ಹುಬ್ಬಳ್ಳಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕರ ಉದ್ದಿಮೆ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ತಮ್ಮ ಒಂದು ವರ್ಷದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಕುರಿತಂತೆ ಸಚಿವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಬಳಿಕ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ. ಸೋಂಕಿನ ಲಕ್ಷಣ ಇರುವವರು ಹಾಗೂ ರೋಗಿಗಳಿಗೆ ಸರ್ಕಾರದಿಂದಲೇ ಚಿಕಿತ್ಸೆ ಒದಗಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರೂ ಕೂಡಾ ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ನೆರವು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.