ಬೆಂಗಳೂರು : ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್(45) ಅವರು ಇಂದು ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬುಲೆಟ್ ಪ್ರಕಾಶ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅಲ್ಲದೇ ಇದರ ಜೊತೆಗೆ ಕಾಲಿಗೆ ಗ್ಯಾಂಗ್ರೀನ್ ಕೂಡ ಆಗಿತ್ತು. ಹೀಗಾಗಿ ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಪ್ರಕಾಶ್ ಅವರನ್ನು ಕನ್ನಿಂಗ್‍ಹ್ಯಾಮ್ ರಸ್ತೆಯ ಪೋರ್ಟೀಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಇವರು ಒಟ್ಟು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಟಿಸುವ ಮೂಲಕ ಎಲ್ಲಾ ಸಿನಿ ಕಲಾವಿದರನ್ನು ರಂಜಿಸುತ್ತಿದ್ದರು.










