ಲಂಡನ್‍ನ ಥೇಮ್ಸ್ ನದಿ ದಡದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಿಸಿದ ಕನ್ನಡಿಗ ವೈದ್ಯ ನೀರಾಜ್ ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢ…

392
firstsuddi

ಬೆಂಗಳೂರು/ಲಂಡನ್‍ : ಇಂಗ್ಲೆಂಡ್‍ನಲ್ಲಿ ಥೇಮ್ಸ್ ನದಿ ದಡದಲ್ಲಿ ಜಗಜ್ಯೋತಿ ಬಸವಣ್ಣ ಅವರ ಪ್ರತಿಮೆಯನ್ನು ಸ್ಥಾಪಿಸಿದ ಖ್ಯಾತಿ ಹೊಂದಿರುವ ಕನ್ನಡಿಗ, ಲ್ಯಾಂಬೆತ್ ನಗರ ಮಾಜಿ ಮೇಯರ್ ಡಾ. ನೀರಾಜ್ ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ವೈದ್ಯರಾಗಿರುವ ನೀರಾಜ್ ಪಾಟೀಲ್ ಅವರಿಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಕೊರೊನಾ ಸೋಂಕು ತಗುಲಿದೆ ಎನ್ನಲಾಗಿದ್ದು, ಈ ಕುರಿತು ಸ್ವತಃ ವೈದ್ಯ ನೀರಾಜ್ ಪಾಟೀಲ್ ಅವರೇ ಸ್ಪಷ್ಟಪಡಿಸಿದ್ದು, ನಾನು ಕೆಲವು ದಿನಗಳಿಂದ ತೀವ್ರ ಚಳಿ ಜ್ವರದಿಂದ ಬಳಲುತ್ತಿದ್ದೇನೆ. ಅಲ್ಲದೇ ನನಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಹೀಗಾಗಿ ನಾನು ಸೆಲ್ಫ್ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾನು ಆದಷ್ಟು ಬೇಗ ಗುಣಮುಖನಾಗಿ ಮತ್ತೆ ಕರ್ತವ್ಯಕ್ಕೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.
ನೀರಾಜ್ ಪಾಟೀಲ್ ಅವರಿಗೆ ಸೋಂಕು ತಗುಲಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭಯ ಎದುರಾಗಿದೆ. ಏಕೆಂದರೆ ನೀರಾಜ್ ಪಾಟೀಲ್ ಅವರು ಫೆ. 29ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಹಾಗೂ ಮಾರ್ಚ್ ಮೊದಲ ವಾರದಲ್ಲಿ ವಿಧಾನ ಸೌಧದಲ್ಲಿ ಅಧಿವೇಶನ ಸಂದರ್ಭದಲ್ಲಿ ಓಡಾಡಿದ್ದರು.