ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಅದರಂತೆ ಈಗಾ ಮತ್ತೆ 6ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ 16 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದ್ದು, 197 ಮಂದಿ ಪೈಕಿ 6ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ ಈವರೆಗೂ ರಾಜ್ಯದಲ್ಲಿ 30 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.










