ಇಂದು ಮತ್ತೆ 7 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆ…

181
firstsuddi

ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ 7 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ 7 ಕೊರೊನಾ ಪ್ರಕರಣಗಳಲ್ಲಿ 5ಮಂದಿ ಮೈಸೂರಿನ ನಂಜನಗೂಡಿನ ಕಾರ್ಖಾನೆಯ ಸಿಬ್ಬಂಧಿಗಳಾಗಿದ್ದು, ನಂಜನಗೂಡಿನಲ್ಲಿ ಮೊದಲ ಕೊರೊನಾ ಸೋಂಕಿತನಿಂದಲೇ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮೈಸೂರಿನ ಜನರಲ್ಲಿ ಆತಂಕ ಹೆಚ್ಚಾಗಿದೆ.