ಕೊರೊನಾ ಅಟ್ಟಹಾಸ-ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ-11 ಹೊಸ ಪಾಸಿಟಿವ್ ಪ್ರಕರಣ ದಾಖಲು…

156
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ ಕೊರೊನಾ ಸೋಂಕಿನಿಂದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಮತ್ತೆ ಹೊಸದಾಗಿ 11 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಹಾಗೂ ಕಲಬುರಗಿ-3, ಬೆಂಗಳೂರು-2, ಚಿಕ್ಕಬಳ್ಳಾಪುರ, ಬೆಳಗಾವಿ, ವಿಜಯಪುರದಲ್ಲಿ ತಲಾ ಒಂದೊಂದು ಪಾಸಿಟಿವ್ ಪ್ರಕರಣ ದಾಖಲಾಗಿದೆ.