ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಈಗಾ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಬೆಳಗಾವಿಯಲ್ಲಿ ಸೋಂಕಿನಿಂದ 80 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆಯಾಗಿದ್ದು, ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಮೃತ ವೃದ್ಧೆ 224ನೇ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರಿಂದ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 19 ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.










