ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಒಂದೇ 34 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ. 34 ಮಂದಿಯ ಪೈಕಿ 15 ಮಂದಿ ಮಹಿಳೆಯರಾಗಿದ್ದಾರೆ. ಅಲ್ಲದೇ ಬೆಳಗಾವಿಯಲ್ಲಿ ಇಂದು ಒಂದೇ ದಿನ 17 ಮಂದಿ ಸೋಂಕಿತರು ಪತ್ತೆಯಾಗಿದ್ದು, ವಿಜಯಪುರ-7, ಬೆಂಗಳೂರು-5, ಮೈಸೂರು-3 , ಗದಗ-1, ಕಲಬುರಗಿ-1 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. 313 ಮಂದಿಯ ಪೈಕಿ 13 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, 82 ಮಂದಿ ಗುಣಮುಖರಾಗಿದ್ದಾರೆ. ಇನ್ನುಳಿದ 218 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
Home Breaking News ಕೊರೊನಾ ಅಟ್ಟಹಾಸ : ರಾಜ್ಯದಲ್ಲಿ ಇಂದು ಒಂದೇ ದಿನ 34ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಸೋಂಕಿತರ ಸಂಖ್ಯೆ...










