ಬೆಂಗಳೂರು : ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಒಂದೇ 38 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 353ಕ್ಕೆ ಏರಿಕೆಯಾಗಿದೆ. ಬಳ್ಳಾರಿಯ ಹೊಸಪೇಟೆಯಲ್ಲಿ ಒಂದೇ ಕುಟುಂಬದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಬೆಂಗಳೂರು 9, ಮೈಸೂರಲ್ಲಿ 12, ಮಂಡ್ಯ, ಚಿಕ್ಕಬಳ್ಳಾಪುರ ತಲಾ 3, ವಿಜಯಪುರ 2, ಬೀದರ್ ಹಾಗೂ ದಕ್ಷಿಣ ಕನ್ನಡ ತಲಾ ಒಂದೊಂದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ 353 ಮಂದಿ ಸೋಂಕಿತರ ಪೈಕಿ 13 ಮಂದಿ ಮೃತಪಟ್ಟಿದ್ದು, 82 ಮಂದಿ ಗುಣಮುಖರಾಗಿದ್ದಾರೆ. 258 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.










