ಮೂಡಿಗೆರೆ : ಸಿಡಿಲು ಬಡಿದು ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹಿತ್ಲುಮಕ್ಕಿ ಗ್ರಾಮದಲ್ಲಿ ನಡೆದಿದೆ. ಮಾದಮ್ಮ(65), ಜ್ಯೋತಿ(28) ಹಾಗೂ ಮಾರಿ(27) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲ್ಲೂಕಿನವರಾಗಿದ್ದು, ಕೂಲಿ ಕೆಲಸಕ್ಕೆಂದು ತಾಲ್ಲೂಕಿಗೆ ಆಗಮಿಸಿದ್ದರು. ಇಂದು ತಾಲ್ಲೂಕಿನ ಹಲವೆಡೆ ಸಿಡಿಲು ಸಹಿತ ಧಾರಾಕಾರ ಮಳೆಯಾದ ಪರಿಣಾಮ ಸಿಡಿಲು ಬಡಿದು ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










