ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ 1800 ಕೊರೊನಾ ಸೋಂಕು ಪತ್ತೆಯಾಗಿದ್ದು, 47 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಕ್ಯೆ 18,601ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾ ಸೋಂಕಿಗೆ 590 ಮಂದಿ ಮೃತಪಟ್ಟಿದ್ದು, 3,252 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಲಾಕ್‍ಡೌನ್ ಆದೇಶ ಮಾಡುವುದಕ್ಕೂ ಮೊದಲು ದಿನಕ್ಕೆ ಶೇ. 7.5ರಷ್ಟು ದಾಖಲಾಗುತ್ತಿದ್ದ ಕೊರೊನಾ ಸೋಂಕು ಪ್ರಕರಣ ಲಾಕ್‍ಡೌನ್ ಬಳಿಕ ಶೇ. 3.4ಕ್ಕೆ ಇಳಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.










