ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ರಾಜ್ಯದಲ್ಲಿ ಹೊಸದಾಗಿ 7 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದೆ. ವಿಜಯಪುರ-3, ಕಲಬುರಗಿ-3 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೂ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 17 ಮಂದಿ ಬಲಿಯಾಗಿದ್ದಾರೆ. ಅಲ್ಲದೆ 114 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.










