ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ; ಕೇಂದ್ರ, ರಾಜ್ಯದ ಸುಗ್ರೀವಾಜ್ಞೆ ಕಟ್ಟುನಿಟ್ಟಾಗಿ ಜಾರಿ – ಬಸವರಾಜ ಬೊಮ್ಮಾಯಿ.

156
firstsuddi

ಉಡುಪಿ: ರಾಜ್ಯದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಆರೋಪಿಗಳಿಗೆ ಜಾಮೀನು ಕೊಡಬಾರದೆಂಬ ವಿಚಾರ ಇದೆ ಆದ್ದರಿಂದ ಕೇಂದ್ರ ರಾಜ್ಯದ ಸುಗ್ರೀವಾಜ್ಞೆ ಕಟ್ಟುನಿಟ್ಟಾಗಿ ಜಾರಿಗೆ ತರುತ್ತೇವೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಅವರು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೋನಾ ವಿಚಾರದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಪ್ರಗತಿಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠೀಯಲ್ಲಿ ಮಾತನಾಡಿದರು. ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಕ್ಕೆ ಕಾರ್ಯಾಚರಣೆ ಮಾಡಿದ್ದೇವೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಗ್ಯ ಕಾರ್ಯಕರ್ತರಿಗೆ ಹಲ್ಲೆ ಅಥವಾ ಅವರ ಕೆಲಸಕ್ಕೆ ನಿರ್ಬಂಧ ವಿಧಿಸಿದರೆ ಸಹಿಸೊದಿಲ್ಲ ಮತ್ತು ಅಂತಹವರ ವಿರುದ್ದ ಮುಖ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಇದರಲ್ಲಿ ಭಾಗಿಯಾದ ವ್ಯಕ್ತಿಗಳು ಯಾರೇ ಎಷ್ಟೇ ದೊಡ್ಡವರಾದ್ರೂ ಕಠಿಣ ಕ್ರಮ ತೆಗದುಕೊಳ್ಳುತ್ತೇವೆ ಪ್ರಕರಣದಲ್ಲಿ ರಾಜಿಗೆ ಅವಕಾಶ ಇಲ್ಲ ಎಂದು ಅವರು ಹೇಳಿದರು.

ಪಾದರಾಯನಪುರ ಹಲ್ಲೆ ಪ್ರಕರಣದ ಕುರಿತು ಮಾತನಾಡಿದ ಸಚಿವ ಬೊಮ್ಮಾಯಿ ಘಟನೆಗೆ ಸಂಬಂಧಿಸಿ ಈಗಾಗಲೇ 126 ಕ್ಕೂ ಹೆಚ್ಚಿನ ಆರೋಪಿಗಳನ್ನು ಬಂಧಿಸಲಾಗಿದ್ದು ಆರೋಪಿಗಳನ್ನು ರಾಮನಗರ ಜೈಲಿನಲ್ಲಿ ಇಡಲಾಗಿದೆ. ಪ್ರಕರಣದ ಒಬ್ಬ ಪ್ರಮುಖ ಆರೋಪಿಯ ಬಂಧನ ಬಾಕಿಯಿದ್ದು ಶೀಘ್ರ ಬಂಧನವಾಗಲಿದೆ. ಆರೋಪಿಗಳ ವಿರುದ್ದ ನ್ಯಾಶನಲ್ ಡಿಸಾಸ್ಟರ್ ಆಕ್ಟ್ ಅಡಿ ಬಂಧಿಸಿ ಎಂಟರಿಂದ ಹತ್ತು ಸೆಕ್ಷನ್ ಹಾಕಲಾಗಿದ್ದುಸರ್ಕಾರಿ ಸೇವೆಗೆ ಅಡ್ಡಿಪಡಿಸಿದ ಪ್ರಕರಣವೂ ದಾಖಲಾಗಿದೆ. ಚಾರ್ಜ್ ಶೀಟ್ ಇನ್ನೂ ಫೈಲ್ ಮಾಡಿಲ್ಲ. ಈ ಪ್ರಕರಣದ ತನಿಖಾ ಹಂತ ನೋಡಿಕೊಂಡು ಸಾಧ್ಯವಿದ್ದರೆ ಅಗತ್ಯ ಸೆಕ್ಷನ್ ಗಳ ಸೇರ್ಪಡೆ ಮಾಡಲಾಗುವುದು ಎಂದರು.