ತಿರುವನಂತಪುರಂ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೇರಳದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ 4 ತಿಂಗಳ ಕಂದಮ್ಮ ಬಲಿಯಾಗಿದೆ. ಮಗುವಿನಲ್ಲಿ ಕೊರೊನಾ ಸೋಂಕು ದೃಢವಾದ ಬಳಿಕ ಕೋಜಿಕೋಡ್‍ನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ ಮಗುವಿನಲ್ಲಿ ಹೃದಯ ಸಮಸ್ಯೆ ಹಾಗೂ ನ್ಯುಮೋನಿಯಾ ಕಾಣಿಸಿಕೊಂಡಿದ್ದು, ಹೀಗಾಗಿ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ಮಲ್ಲಾಪ್ಪುರಂನ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.










