ಚಿಕ್ಕಮಗಳೂರು : ಸೋನಿಯ ಗಾಂಧಿ ಅವರ ಬಗ್ಗೆ ಅವಹೇಳನ-ಪತ್ರಕರ್ತ ಅರ್ನಾಬ್ ಗೋಸ್ವಾಮಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್‍ ವತಿಯಿಂದ ದೂರು ದಾಖಲು…

248
firstsuddi

ಚಿಕ್ಕಮಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ನಗರದ ಠಾಣೆಯಲ್ಲಿ ದೂರು ದಾಖಲಿಸಿದೆ.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್ ಮತ್ತು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾಹಿಲ್ ಶರೀಫ್ ಅವರು ವೃತ್ತ ನಿರೀಕ್ಷಕ ಸಲೀಂ ಅಬ್ಬಾಸ್ ಅವರಿಗೆ ದೂರು ಸಲ್ಲಿಸಿದರು.
ಪಕ್ಷದ ವರಿಷ್ಟೆ ಸೋನಿಯ ಗಾಂಧಿಯವರ ಬಗ್ಗೆ ಹೀನಾಯವಾಗಿ ಮಾತನಾಡಿರುವ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ 117-120(ಬಿ)-153-153(ಎ)-295(ಎ)-298-505-ಆರ್/ಡಬ್ಯೂ ಸಕ್ಷನ್ 66(ಎ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಹೇಳಲಾಗಿದೆ.
ದೇಶದ ಸರ್ವೋಚ್ಚ ನ್ಯಾಯಾಲಯವು ಘೋಷಿಸಿರುವಂತೆ ಜಾತ್ಯಾತೀತೆಯು ನಮ್ಮ ಸಂವಿಧಾನದ ಮೂಲ ರಚನೆಯ ಭಾಗವಾಗಿದ್ದು ಅರ್ನಾಬ್ ಗೋಸ್ವಾಮಿ ಅವರ ಹೇಳಿಕೆಗಳು ಸಂವಿಧಾನದ ಆಶಯಕ್ಕೆ ಧಕ್ಕೆ ತರುವಂತದ್ದಾಗಿದೆ. ಹಾಗಾಗಿ ಅವರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.