ಬೆಂಗಳೂರು : ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದ್ದು, ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.











