ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಧ್ಯಹ್ನಾದ ಹೆಲ್ತ್ ಬುಲೆಟಿನ್‍ನಲ್ಲಿ 15 ಮಂದಿಗೆ ಸೋಂಕು ತಗುಲಿರುವುದಾಗಿ ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 6, ಬೆಳಗಾವಿಯಲ್ಲಿ 6, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬೊಬ್ಬರಿಗೆ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ರಾಜ್ಯದಲ್ಲಿ ಈವರೆಗೆ 489 ಮಂದಿಯ ಪೈಕಿ 152 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 18 ಮಂದಿ ಮೃತಪಟ್ಟಿದ್ದಾರೆ. ಇನ್ನುಳಿದ 319 ಮಂದಿ ರಾಜ್ಯದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ










