ರಾಜ್ಯದಲ್ಲಿ ಇಂದು 8 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ…

188
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ರಾಜ್ಯದಲ್ಲಿ ಇಂದು 8 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ದಕ್ಷಿಣ ಕನ್ನಡ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ತಲಾ 2 ಪ್ರಕರಣ ಹಾಗೂ ಬೆಂಗಳೂರು, ಮಂಡ್ಯ ಜಿಲ್ಲೆಯಲ್ಲಿ ತಲಾ 1 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.