ಮುಂಬೈ : ಬಾಲಿವುಡ್ನ ಹಿರಿಯ ನಟ ರಿಷಿ ಕಪೂರ್ ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ. 67 ರಿಷಿ ಕಪೂರ್ ಅವರು ಕಳೆದ ಕೆಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ನಿನ್ನೆ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ,










