ಬೆಂಗಳೂರು ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇಂದು 8 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು-3, ಬಾಗಲಕೋಟೆ-2, ದಕ್ಷಿಣ ಕನ್ನಡ, ಬಳ್ಳಾರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 659 ಮಂದಿ ಸೋಂಕಿತರ ಪೈಕಿ 324 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 28 ಮಂದಿ ಬಲಿಯಾಗಿದ್ದಾರೆ. ಇನ್ನುಳಿದವರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










