ರಾಜ್ಯದಲ್ಲಿ ಇಂದು 8 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆ-ಒಂದು ಸಾವು…

137
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಇಂದು ಒಂದೇ ದಿನ 8 ಮಂದಿಯಲ್ಲಿ ಸೋಂಕು ತಗುಲಿರುವುದು ದೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ 701ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಬಲಿಯಾದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ದಾವಣಗೆರೆ-3, ಕಲಬುರಗಿ-3 ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಹಾಗೂ ದಾವಣಗೆರೆ ಜಿಲ್ಲೆಯಲ್ಲಿ 55 ವರ್ಷದ ಮಹಿಳೆಯೊಬ್ಬರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.