ವಿಶಾಖಪಟ್ಟಣಂ : ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ತಲಾ 1 ಕೋಟಿ ರೂ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇಂದು ಮುಂಜಾನೆ ವಿಶಾಖಪಟ್ಟಣಂ ನ ಆರ್.ಆರ್. ವೆಂಕಟಪುರಂನಲ್ಲಿ ಇರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿ 10 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂಧಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ್ದು, ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರದಿಂದಲೇ ಭರಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.










