ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಒಂದೇ ದಿನ 36 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗಿನ ಹೆಲ್ತ್ ಬುಲೆಟಿನ್ ಪ್ರಕಾರ, ಬೆಂಗಳೂರು-12, ಭಟ್ಕಳ-07, ದಾವಣಗೆರೆ-6, ಚಿತ್ರದುರ್ಗ-3, ದಕ್ಷಿಣ ಕನ್ನಡ-3 ಬೀದರ್-3, ವಿಜಯಪುರ, ತುಮಕೂರು ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು 789 ಮಂದಿ ಸೋಂಕಿತರ ಪೈಕಿ 30 ಜನ ಸೋಂಕಿಗೆ ಬಲಿಯಾಗಿದ್ದು, 379 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.










