ದೇಶಕ್ಕೆ 20 ಲಕ್ಷ ಕೋಟಿ ರೂ ಆರ್ಥಿಕ ಪ್ಯಾಕೇಜ್-ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ವಿತ್ತ ಸಚಿವೆ ವಿವರಣೆ…

170
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡುತ್ತಾ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸಿದ್ದು, ಈ ಕುರಿತು ಇಂದು ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿವರಣೆ ನೀಡಲಿದ್ದಾರೆ. ಮೇ.17ರಂದು 3ನೇ ಹಂತದ ಲಾಕ್‍ಡೌನ್ ಮುಕ್ತಾಯವಾಗಲಿದ್ದು, ಈ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಬಳಿಕ ನಿನ್ನೆ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದರು. ಈ ವೇಳೆ ಮೇ.18ರ ಬಳಿಕ 4ನೇ ಹಂತದ ಲಾಕ್‍ಡೌನ್ ಹೊಸ ನಿಯಮದಂತೆ ಜಾರಿಯಾಗಲಿದೆ ಎಂದು ತಿಳಿಸಿದ್ದು, ದೇಶದಲ್ಲಿರುವ ಬಡವರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಸೇರಿದಂತೆ ವಿವಿಧ ಸಂಘಟಿತ ವಲಯಕ್ಕೆ 20 ಲಕ್ಷ ಕೋಟಿ ರೂ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ನಡೆಯುವ ಸುದ್ದಿಗೋಷ್ಠಿಯಲ್ಲಿ ಯಾವೆಲ್ಲಾ ಕ್ಷೇತ್ರಗಳಿಗೆ ಎಷ್ಟು ಮೊತ್ತವನ್ನು ನೀಡಲಾಗುತ್ತದೆ ಎಂಬುವುದರ ಬಗ್ಗೆ ವಿವರಣೆ ನೀಡಲಿದ್ದಾರೆ.