ಮಹಾಮಾರಿ ಕೊರೊನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 80 ವರ್ಷದ ವೃದ್ಧೆ ಬಲಿ…

113
firstsuddi

ಮಂಗಳೂರು : ಮಹಾಮಾರಿ ಕೊರೊನಾ ವೈರಸ್‍ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಶಕ್ತಿನಗರ ಮೂಲದ ನಿವಾಸಿ 80 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ವೃದ್ಧೆ ಪಾರ್ಶ್ವವಾಯು ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇವರಿಗೆ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ.