ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆ…

133
firstsuddi

ಬೆಂಗಳೂರು ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಇಂದು ಒಂದೇ ದಿನ 22 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು-5, ಬೀದರ್-4, ಗದಗ-4, ಮಂಡ್ಯ-4, ದಾವಣಗೆರೆ-3, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದ್ದು, ಅಲ್ಲದೇ ಇದರೊಂದಿಗೆ ಇಂದು ಇಬ್ಬರು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. 981 ಸೋಂಕಿತರ ಪೈಕಿ 35 ಮಂದಿ ಸೋಂಕಿಗೆ ಬಲಿಯಾಗಿದ್ದು, 456 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 490 ಮಂದಿ ರಾಜ್ಯದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.