ಟ್ರಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ-24 ಮಂದಿ ವಲಸೆ ಕಾರ್ಮಿಕರ ಧಾರುಣ ಸಾವು…

177
firstsuddi

ಲಕ್ನೋ : ಎರಡು ಟ್ರಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ. ವಲಸೆ ಕಾರ್ಮಿಕರು ಇಂದು ಮುಂಜಾನೆ ಸುಮಾರು 3:30ರ ವೇಳೆಗೆ ರಾಜಸ್ತಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ಟ್ರಕ್ ಮೂಲಕ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟ್ರಕ್ ಡಿಕ್ಕಿಯಾದ ಪರಿಣಾಮ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.