ಕರ್ನಾಟಕದಲ್ಲಿ ಇಂದು ಒಂದೇ ದಿನ 36 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 1,092ಕ್ಕೆ ಏರಿಕೆ…

187
firstsuddi

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 33 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,092ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯಿಂದ ಬಿಡುಗಡೆಯಾದ ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 23 ಪ್ರಕರಣ ಪತ್ತೆಯಾಗಿತ್ತು. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 13 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ರಾಜ್ಯದಲ್ಲಿ 36 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.