ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಇಂದು ಒಂದೇ ದಿನ 84 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1231ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು-18, ಮಂಡ್ಯ-17, ಉತ್ತರಕನ್ನಡ-8, ರಾಯಚೂರು-6, ಕಲಬುರಗಿ-6, ವಿಜಯಪುರ-5, ಗದಗ-5, ಹಾಸನ-4, ಕೊಪ್ಪಳ-3, ಬೆಳಗಾವಿ-2, ಯಾದಗಿರಿ-5, ಬಳ್ಳಾರಿ, ಬೀದರ್, ದಾವಣಗೆರೆ, ಮೈಸೂರು, ಕೊಡಗು ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಾಗಿದೆ.










