ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ-ಇನ್ನೆರಡು ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಸೂಚನೆ…

531
firstsuddi

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ನಿನ್ನೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ನಿನ್ನೆ ಸಂಜೆ ಚಿಕ್ಕಮಗಳೂರು, ಉಡುಪಿ, ಕೊಡಗು, ದಕ್ಷಿಣ ಕನ್ನಡ, , ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ರಾಜ್ಯದ ಕೆಲವೆಡೆ ಭಾರೀ ಗಾಳಿ, ಮಳೆಯ ಮುನ್ಸೂಚನೆ ಇದ್ದು ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದಿಂದ ಮುನ್ನೆಚ್ಚರಿಕೆ ನೀಡಲಾಗಿದೆ. ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ಅಂಫಾನ್ ಎಂದು ಹೆಸರಿಡಲಾಗಿದೆ. ಇದು ಪ್ರಸ್ತುತ ಋತುವಿನ ಮೊದಲ ಚಂಡ ಮಾರುತವಾಗಲಿದೆ. ವಾಯುಭಾರ ಕುಸಿತದಿಂದ ಬಂಗಾಳ ಕೊಲ್ಲಿಯ ಆಗ್ನೇಯ ಭಾಗ, ಅಂಡಮಾನ್, ನಿಕೋಬಾರ್ ದ್ವೀಪ ಹಾಗೂ ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರಿ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.