ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ನಿನ್ನೆ ಒಂದೇ ದಿನ ಭಾರತದಲ್ಲಿ ಬರೋಬ್ಬರಿ 4,970 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,01,139ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 134 ಮಂದಿ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಮೃತ ಪಟ್ಟವರ ಸಂಖ್ಯೆ 3,163ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










