ಕರ್ನಾಟಕದಲ್ಲಿ ಕೊರೊನಾ ಮಹಾಸ್ಪೋಟ-ಇಂದು ಒಂದೇ ದಿನ 127 ಮಂದಿಗೆ ಸೋಂಕು…

215
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಇಂದು ಒಂದೇ 127 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1373ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಇಂದು ಮಂಡ್ಯ ಜಿಲ್ಲೆಯೊಂದರಲ್ಲೇ 61 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ದಾವಣಗೆರೆ-19, ಶಿವಮೊಗ್ಗ-12, ಕಲಬುರಗಿ-11, ಬೆಂಗಳೂರು-6, ಉಡುಪಿ-4, ಚಿಕ್ಕಮಗಳೂರು-2, ಹಾಸನ-3, ಉತ್ತರ ಕನ್ನಡ-4, ಗದಗ, ಯಾದಗಿರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದೊಂದು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.