ಗ್ರೀನ್ ಜೋನ್ ಚಿಕ್ಕಮಗಳೂರು ಜಿಲ್ಲೆಗೂ ವಕ್ಕರಿಸಿದ ಮಹಾಮಾರಿ ಕೊರೊನಾ ಸೋಂಕು…!

338
firstsuddi

ಚಿಕ್ಕಮಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಕಳೆದ 60 ದಿನದಿಂದ ಒಂದೂ ಕೊರೊನಾ ಪಾಸಿಟಿವ್ ಪ್ರಕರಣ ಇಲ್ಲದೇ ಗ್ರೀನ್ ಜೋನ್ ನಲ್ಲಿದ್ದ ಚಿಕ್ಕಮಗಳೂರು ಜಿಲ್ಲೆಗೂ ಕೊರೊನಾ ಸೋಂಕು ಕಾಲಿಟ್ಟಿದ್ದು, ಜಿಲ್ಲೆಯ ಮೂಡಿಗೆರೆ ಪಟ್ಟಣದ 43 ವರ್ಷದ ವೈದ್ಯ ಹಾಗೂ ತರೀಕೆರೆಯ 27 ವರ್ಷದ ಗರ್ಭಿಣಿ ಮಹಿಳೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.