ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 4 ಕೊರೋನಾ ಪಾಸಿಟಿವ್ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ವೈರಸ್ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ 25, 24 ವರ್ಷದ ಪುರುಷ, 24 ವರ್ಷದ ಮಹಿಳೆ ಮತ್ತು 8 ವರ್ಷದ ಹುಡುಗನಲ್ಲಿ ಕೊರೋನಾ ಪಾಸಿಟಿವ್ ಇರುವುದು ದೃಢಗೊಂಡಿದೆ. ಎಲ್ಲರನ್ನೂ ಟಿ ಎಮ್ ಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.










